ರೇಣುಕಾಸ್ವಾಮಿ ಕೊಲೆ ಪ್ರಕರಣ : ಡಿ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 4,000 ಪುಟಗಳ ದೋಷಾರೋಪ ಪಟ್ಟಿಯನ್ನು ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಈ ಮೊದಲು ಎಫ್‌ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ…

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 4,000 ಪುಟಗಳ ದೋಷಾರೋಪ ಪಟ್ಟಿಯನ್ನು ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ.

ಈ ಮೊದಲು ಎಫ್‌ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್​ಶೀಟ್​ನಲ್ಲಿ ಬದಲಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಹಾಗಾಗದೆ ದರ್ಶನ್ ಅವರು ಎ2 ಆರೋಪಿ ಆಗಿ, ಪವಿತ್ರಾ ಅವರು ಎ1 ಆರೋಪಿ ಆಗಿ ಮುಂದುವರಿದ್ದಾರೆ. ಇದರಿಂದ ದರ್ಶನ್ ಫ್ಯಾನ್ಸ್​ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್‌ಎಸ್‌ಎಲ್ ಮಾತ್ತು ಸಿಎಫ್‌ಎಸ್‌ಎಲ್‌ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಪ್ರಕರಣದಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಸಿಆರ್‌ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಅನ್ನು ಕೋರ್ಟ್​ಗೆ ಸಲ್ಲಿಸಲಾಗಿದೆ.

Vijayaprabha Mobile App free

ಅಪಹರಣ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಂತ್ರ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ದೃಢಪಟ್ಟಿದೆ. ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ, ಅವರು ಎ1 ಆಗಿದ್ದಾರೆ. ಹಲ್ಲೆ ನಡೆಯುವ ಸ್ಥಳದಲ್ಲಿ ಅವರು ಹಾಜರಿದ್ದರು. ಚಪ್ಪಲಿಯಲ್ಲಿ ಅವರು ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರ ಗೌಡ ಅಲ್ಲೇ ಇರುವುದಕ್ಕೆ ಸಾಕ್ಷಿ ದೊರೆತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.