ರೇಣುಕಾಸ್ವಾಮಿ ಕೊಲೆ ಕೇಸ್‌ : ಜಾಮೀನು ಕೋರಿ ಅರ್ಜಿ ಸಲ್ಲಿಸಿದ ನಟ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ…

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್‌ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ನೀಡಿದ ನ್ಯಾಯಾಲಯ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್‌ ಪರ ವಕೀಲ ಎಸ್‌.ಸುನೀಲ್‌ ಕುಮಾರ್‌ ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದರು.  ನ್ಯಾಯಾಧೀಶ ಜಯಶಂಕರ್‌ ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿಗೊಳಿಸಿ ಸೆ.23ಕ್ಕೆ ವಿಚಾರಣೆ ಮುಂದೂಡಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 3991 ಪುಟಗಳ ದೋಷಾರೋಪಣ ಪಟ್ಟಿಯನ್ನು ಸೆ. 4ರಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ 18 ದಿನಗಳ ಬಳಿಕ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದೋಷಾರೋಪಣೆ ಪಟ್ಟಿ ಸಲ್ಲಿಕೆಗೂ ಮೊದಲು ಪವಿತ್ರಾಗೌಡ ಸೇರಿ ಇತರರು ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.