ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜೈಲಲ್ಲಿ ನಟ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ-ಪ್ರೇಮ್!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಕೂಡ ಶನಿವಾರ…

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಕೂಡ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಿತಾ, ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಇದರ ಬಗ್ಗೆ ಏನು ಮಾತಾನಾಡುವುದಿಲ್ಲ. ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿಸಿಗಲಿ ಎಂದು ಹೇಳಿದರು. ದರ್ಶನ್ ಆರಾಮಾಗಿದ್ದಾರಾ ಎಂಬ ಪ್ರಶ್ನೆಗೆ ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಆರಾಮಾಗಿ ಇರುತ್ತಾರಾ ಎಂದು ಭಾವುಕರಾಗಿ ಪ್ರಶ್ನಿಸಿದರು.

ನಿರ್ದೇಶಕ ಜೋಗಿ ಪ್ರೇಮ್‌ ಮಾತನಾಡಿ, ನ್ಯಾಯಾಲಯದಲ್ಲಿರುವ ಕಾರಣ ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

Vijayaprabha Mobile App free

ಇದೇ ವೇಳೆ ಪವಿತ್ರಾ ಗೌಡ ಪರ ವಕೀಲರು ಪವಿತ್ರಾ ಅವರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವಿತ್ರಾ ಯಾವುದೇ ತಪ್ಪು ಮಾಡಿಲ್ಲ. ಪ್ರಕರಣದಿಂದ ಶಾಕ್’ಗೆ ಒಳಗಾಗಿದ್ದಾರೆಂದು ಹೇಳಿದರು. ಪವಿತ್ರಾ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಸ್ವಲ್ಪ ಆಘಾತಕ್ಕೊಳಗಾಗಿದ್ದಾರೆ. ನ್ಯಾಯಾಂಗ ಬಂಧನ ಮುಗಿದ ನಂತರ ನಾವು ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಜೈಲಿನಲ್ಲಿ ಯಾರಿಗೂ ಸ್ಪೆಷಲ್ ಟ್ರೀಟ್ಮೆಂಟ್ ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.