ಬೆಂಗಳೂರು: ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದ್ದು, ಈ ಮಧ್ಯೆ ಅವಧಿಗೂ ಮುನ್ನ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮುಂದಿನ 45 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿಯನ್ನು ಬಂಧಿಸಲಾಗಿದೆ. ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಿದ್ದು, ಈಗಾಗಲೇ 200ಕ್ಕೂ ಹೆಚ್ಚು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಆರೋಪಿಗಳ ಮೊಬೈಲ್ ರಿಟ್ರೀವ್ ಗೆ ರವಾನಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ.
ಇನ್ನು ಪ್ರಕರಣದಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದವರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ದರ್ಶನ್‌ಗೆ ಹಣ ನೀಡಿದ್ದ ಮೋಹನ್ ರಾಜ್, ಡೆವಿಲ್ ನಿರ್ಮಾಪಕ ಮಿಲನ ಪ್ರಕಾಶ್, ಪವಿತ್ರಾ ಆಪ್ತೆ ಸಮತಾ, ಶಾಸಕರ ಕಾರು ಚಾಲಕ ಕಾರ್ತಿಕ್ ಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment