ಏಪ್ರಿಲ್ 4ರಿಂದ 14ರವರೆಗೆ ಬೆಂಗಳೂರು ಕರಗ ಏ.4 ರಿಂದ 14ರವರೆಗೆ ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ನಡೆಯಲಿದೆ.
ಏ.12ರ ಚೈತ್ರ ಪೌರ್ಣಮಿಯಂದು ಕರಗ ಶಕ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.
ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಇವರು, ಈ ಸಲ 15ನೇ ಬಾರಿಗೆ ಕರಗ ಹೊರಲಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ.
ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದ್ದು, ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ & ಮಹಾಮಂಗಳಾರತಿ ನಡೆಯಲಿದೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.