ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:16.10.2024 ಮತ್ತು 17-10- 2024ರಂದು ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:16.10.2024ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸೂಚನೆಗಳು:
- ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
- ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
- ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
4. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು.
- ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
- ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.