ಮುಂಬೈ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ತಮ್ಮ ಇತರೆ ಕುಟುಂಬ ಸದಸ್ಯರೊಟ್ಟಿಗೆ ದಕ್ಷಿಣ ಮುಂಬೈನ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಜೋಡಿಗೆ ಹೆಣ್ಣು ಮಗುವಾಗಿದೆ. ಈ ಮೂಲಕ ಅಭಿಮಾನಿಗಳಿಗೆ ನಟಿ ಗುಡ್ ನ್ಯೂಸ್ ನೀಡಿದ್ದಾರೆ.
ದೀಪಿಕಾ ಪಡುಕೋಣೆ ಅವರಿಗೆ ಇದೇ ತಿಂಗಳ 28 ಕ್ಕೆ ಡೇಟ್ ಕೊಡಲಾಗಿತ್ತು. ಇದೀಗ ಗೌರಿ ಗಣೇಶ ಹಬ್ಬದ ನಡುವೆ ನಟಿ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಕುಟುಂಬದಲ್ಲಿ ಸಂತಸ ತಂದಿದೆ.
ದೀಪಿಕಾ ಪಡುಕೋಣೆ ಅವರ ಡೆಲಿವರಿ ಲಂಡನ್‌ನಲ್ಲಿ ಆಗಲಿದೆ. ಅಲ್ಲಿಯೇ ದೀಪಿಕಾ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಮುಂಬೈನಲ್ಲಿಯೇ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment