ನವದೆಹಲಿ: ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೇಲ್ ಬಂದಿದೆ. ಈ ಹಿನ್ನೆಲೆ ವಿಮಾನವನ್ನು ತೀವ್ರ ತಪಾಸಣೆಗೆ ಒಳಪಡಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೋಗಬೇಕಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ವಿಮಾನ ನಿಲ್ದಾಣದ ಕಚೇರಿಗೆ ಇಮೇಲ್ ಬಂದಿತ್ತು. ಬಳಿಕ, ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆ ವೇಳೆ ಯಾವುದೇ ರೀತಿಯಾದ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ದೆಹಲಿಯ ಶಾಲೆಗಳು, ಮ್ಯೂಸಿಯಂಗಳು, ವೈದ್ಯಕೀಯ ಸಂಸ್ಥೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬರುತ್ತಿವೆ. ಆದರೆ ಈ ರೀತಿಯಾಗಿ ಬೆದರಿಕೆ ಇಮೇಲ್ ಬಂದ ಸ್ಥಳಗಳಲ್ಲಿ ಎಲ್ಲಿಯೂ ಕೂಡ ಬಾಂಬ್‌ಗಳು ಪತ್ತೆಯಾಗಿಲ್ಲ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment