Mysuru Dasara: ವಾರ್ತಾ ಇಲಾಖೆಯ ಸ್ತಬ್ಧಚಿತ್ರಕ್ಕೆ ಮೈಸೂರು ದಸರಾದಲ್ಲಿ ಪ್ರಥಮ ಬಹುಮಾನ

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ.

ಸ್ತಬ್ಧಚಿತ್ರದ ವಿಶೇಷತೆ:

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು. ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬುತ್ತಿದೆ.

Advertisement

Vijayaprabha Mobile App free

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ʼಕರ್ನಾಟಕದ ಸಾಂಸ್ಕೃತಿಕ ರಾಯಭಾರಿʼ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸುವ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದವರು. ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡವರು.

ಬಸವಣ್ಣನವರ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ʼಕರ್ನಾಟಕದ ಸಾಂಸ್ಕೃತಿಕ ರಾಯಭಾರಿʼ ಎಂದು ಘೋಷಿಸಿದರು. ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶಿಸಿದರು.

ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.

ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನವು ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪುನಃ ಸ್ಥಾಪಿಸುವುದು, ಅಸ್ಪೃಶ್ಯತೆ ಮತ್ತು ಇತರ ವಿಷಯಗಳ ಜೊತೆಗೆ ಚರಕ ಮತ್ತು ಖಾದಿಯ ಪ್ರಾಮುಖ್ಯತೆಯನ್ನು ಒತ್ತಿಹೇಳುವುದು ಅವರ ಪ್ರಾಥಮಿಕ ಉದ್ದೇಶವಾಗಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಸಂಪೂರ್ಣ ಆವರಣವನ್ನು ವಿಜಯನಗರ ಎಂದು ಹೆಸರಿಸಲಾಗಿತ್ತು.

ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲ ಬಾರಿಗೆ ಹಾರಿಸಲಾಗಿತ್ತು. ಇದರ ಮಾದರಿ ಪ್ರತಿಕೃತಿಯನ್ನು ಸ್ತಬ್ಧಚಿತ್ರದ ಮಧ್ಯ ಭಾಗದಲ್ಲಿ ತೋರಿಸಲಾಗಿದೆ. ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧೀಜಿಯವರು ತಮ್ಮ ಅಧ್ಯಕ್ಷೀಯ ಭಾಷಣವನ್ನು ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಭಾಷಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.

ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು. ʼಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸುʼ ಧ್ಯೇಯವಾಕ್ಯದೊಂದಿಗೆ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿಯ ಬಗ್ಗೆ ಮಾಹಿತಿ ಫಲಕ‌ ಅಳವಡಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಪರಿಕಲ್ಪನೆಯಂತೆ, ಕ್ಷೇತ್ರ ಪ್ರಚಾರ ಶಾಖೆ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ಸ್ತಬ್ಧಚಿತ್ರ ನಿರ್ಮಾಣಕ್ಕೆ ಶ್ರಮಿಸಿದ್ದರು. ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!