ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ?: ದಿನೇಶ್ ಗುಂಡೂರಾವ್ ಆಕ್ರೋಶ

ಬೆಳಗಾವಿ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಜ್ಯಪಾಲರು ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದೆ, ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ನೀಡಿದ್ದಾರೆ. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಮತ್ತು ಪಕ್ಷಪಾತ…

ಬೆಳಗಾವಿ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಜ್ಯಪಾಲರು ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದೆ, ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ನೀಡಿದ್ದಾರೆ. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಮತ್ತು ಪಕ್ಷಪಾತ ಮಾಡುತ್ತಿರುವುದು ಗೊತ್ತಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲಾ. ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ಥಿರ ಮಾಡುವುದು, ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಆಪರೇಷನ್ ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ. ಸರ್ಕಾರ ಬೀಳಿಸುವುದೊಂದೇ ಅವರ ಕಾರ್ಯಕ್ರಮ ಆಗಿದೆ ಎಂದು ಆಕ್ರೊಶ ವ್ಯಕ್ತಪಡಿಸಿದರು.

ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭ್ರಷ್ಟ ಸಿಎಂ, ಭ್ರಷ್ಟ ಸಿಎಂ ಆಕಾಂಕ್ಷಿಗಳು ಎಂದು ಪೋಸ್ಟ್ ಹಾಕಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅವರ ಸೋಷಿಯಲ್ ಮೀಡಿಯಾದಲ್ಲಿ ಏನೇನೂ ಹಾಕಿರುತ್ತಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ? ಸುಳ್ಳು ಸುದ್ದಿ ಪ್ರಚೋದನೆ ಮಾಡುವುದರಲ್ಲಿ ಬಿಜೆಪಿಯವರು ದೇಶದಲ್ಲಿ ನಂಬರ್ ಒನ್ ಎಂದು ಲೇವಡಿ ಮಾಡಿದರು.

Vijayaprabha Mobile App free

ಕೋರ್ಟಿನಲ್ಲಿ ಯಾವುದೇ ರೀತಿ ವ್ಯತಿರಿಕ್ತವಾದ ತೀರ್ಮಾನ ಬರುವುದಿಲ್ಲ. ನ್ಯಾಯಾಲಯದಲ್ಲಿ ರಾಜ್ಯಪಾಲರು ತನಿಖೆಗೆ ಕೊಟ್ಟಿರುವುದು ಸರಿಯೋ ಇಲ್ಲವೋ ಅಷ್ಟೇ ಇರೋದು. ಅವರು ತಪ್ಪು ಮಾಡಿದ್ದಾರೆ ಎನ್ನುವುದು ಇಲ್ಲ. ನಮ್ಮ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಅಧಿಕಾರದ ದುರುಪಯೋಗವು ಮಾಡಿಲ್ಲ ಎಂದು ತಿಳಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.