Education department: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಅದೋಗತಿ ತಲುಪಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ ಕಂಡಿದೆ. ವರ್ಷದಿಂದ ವರ್ಷಕ್ಕೆ ಕನ್ನಡ ಶಾಲೆಗಳು ಮುಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.
ಶಾಲೆಯಲ್ಲಿ ಮಕ್ಕಳ ಹಾಜರಾತಿ ಕುಸಿತವಾದರೆ ಅಧಿಕಾರಿಗಳನ್ನ ಹೊಣೆ ಮಾಡುವ ನಿರ್ಧಾರಕ್ಕೆ ಬಂದಿದೆ. ಮಕ್ಕಳಿಗೆ ಶಾಲೆಯಲ್ಲಿ ರಾಗಿ ಮಾಲ್ಟ್, ಮೊಟ್ಟೆ, ಚಿಕ್ಕಿ, ಹಾಲು ನೀಡಿದರೂ ಹಾಜರಾತಿ ಕುಸಿತ ಕಂಡು ಬರುತ್ತಿದೆ. ಆದ್ದರಿಂದ ಶಿಕ್ಷಣ ಇಲಾಖೆ ಮಕ್ಕಳ ಹಾಜರಾತಿ ಹೆಚ್ಚಿಸುವ ಹೊಣೆಯನ್ನು ಡಿಡಿಪಿಐ ಹಾಗೂ ಬಿಇಎ ಅಧಿಕಾರಿಗಳಿಗೆ ನೀಡಿದೆ.
ಗುಡ್ ನ್ಯೂಸ್.. ರಾಜ್ಯದ ಶಾಲೆಗಳಲ್ಲಿ ಸೆಪ್ಟೆಂಬರ್’ನಿಂದಲೇ ಜಾರಿ
ರಾಜ್ಯದ ಸರ್ಕಾರಿ ಶಾಲೆ & ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದು, ಸೆಪ್ಟೆಂಬರ್‌ನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ ಮಾಡುತ್ತೇವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮಕ್ಕೆ ಭೇಟಿ ನೀಡಿದ ಅವರು, ಮಕ್ಕಳೊಂದಿಗೆ ದಿನನಿತ್ಯ ನೀಡುವ ಬಿಸಿಯೂಟದ ಬಗ್ಗೆ ಮಾಹಿತಿ ಪಡೆದರು. ವಾರಕ್ಕೆರಡು ಬಾರಿ ಕಡ್ಡಾಯವಾಗಿ ಶಾಲೆಯಲ್ಲಿ ಊಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲಾಗುತ್ತಿದೆ ಎಂಬ ಬಗ್ಗೆ ಸಚಿವರು ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು.
https://vijayaprabha.com/cancellation-of-medical-shop-license-by-health-department/