ಹಣ ಸುಲಿಗೆ ಆರೋಪದಡಿ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಅರೆಸ್ಟ್‌..!

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಬಂಧನವಾಗಿದೆ. ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪ ಹಿನ್ನಲೆಯಲ್ಲಿ ಬೆಂಗಳೂರಿನ ಜೀವನ್…

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಬಂಧನವಾಗಿದೆ. ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪ ಹಿನ್ನಲೆಯಲ್ಲಿ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಇಂದಿರಾ ನಗರದಲ್ಲಿರುವ ಸ್ಪಾ ಮಾಲೀಕನ ಸುಲಿಗೆ ಮಾಡಿದ ಪ್ರಕರಣದಲ್ಲಿ ದೂರು ದಾಖಲಾಗುತ್ತಿದ್ದಂತೆ ನಿರೂಪಕಿ ದಿವ್ಯಾ ವಸಂತ ತಲೆಮರೆಸಿಕೊಂಡಿದ್ದರು. ಬಳಿಕ ಕೇರಳದಲ್ಲಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಿವ್ಯಾ ವಸಂತಳನ್ನು ಬಂಧಿಸಿದ್ದಾರೆ.ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳಕ್ಕೆ ತೆರಳಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ನ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ದಿವ್ಯ ಅಂಡ್​ ಗ್ಯಾಂಗ್​ ವಿರುದ್ದ ಈಗಾಗಲೇ ಸುಲಿಗೆ, ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದೆ. ಸದ್ಯ ಜೀವನ್​ ಭೀಮಾ ನಗರದ ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.