(Drink Drive Test) ರಾಜ್ಯದಲ್ಲಿ ಅಪಘಾತ ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಇದೀಗ ಪೊಲೀಸರು ವಿಶೇಷ ಕಾರ್ಯಾಚಾರಣೆಗೆ ಇಳಿದಿದ್ದಾರೆ.
ಹೌದು, ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು ವಾರದಲ್ಲಿ ನಾಲ್ಕು ದಿನ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.
ಗುರುವಾರದಿಂದ ಭಾನುವಾರದವರೆಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ಕಣ್ಣಿಡಲಿದ್ದಾರೆ. ಒಂದು ವೇಳೆ ಸಿಕ್ಕಿ ಹಾಕಿಕೊಂಡ್ರೆ ದಂಡ ಫಿಕ್ಸ್, ಗಾಡಿ ಸೀಜ್ ಮಾಡಲಿದ್ದರೆ. ಸವಾರರು/ಚಾಲಕರುಗಳ ವಿರುದ್ಧ ಪ್ರತಿವಾರ ಠಾಣೆಯ ಎಲ್ಲ ಸಬ್ ಇನ್ ಸ್ಪೆಕ್ಟರ್ ಗಳು ಕಡ್ಡಾಯವಾಗಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಬೇಕು ಎಂದು ಜಂಟಿ ಆಯುಕ್ತ (ಸಂಚಾರ) ಅನುಚೇತ್ ಸೂಚಿಸಿದ್ದಾರೆ. ಈ ಸಮಯದಲ್ಲಿ ಮಹಿಳಾ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕೆಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment