ವಿದ್ಯಾರ್ಥಿಗಳಿಗೆ ಸುಲಭ ಸಾಲ ಭಾಗ್ಯ: ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ 

ನವದೆಹಲಿ: ವಿದ್ಯಾರ್ಥಿಗಳಿಗೆ ₹7.5 ಲಕ್ಷದಿಂದ ₹10 ಲಕ್ಷದವರೆಗೆ ಖಾತರಿ ರಹಿತ ಸಾಲದ ಆರ್ಥಿಕ ನೆರವು ನೀಡುವ ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ 3,600 ಕೋಟಿ ನಿಧಿಯನ್ನು…

student stipend, fee exemption, vidyasiri stipend

ನವದೆಹಲಿ: ವಿದ್ಯಾರ್ಥಿಗಳಿಗೆ ₹7.5 ಲಕ್ಷದಿಂದ ₹10 ಲಕ್ಷದವರೆಗೆ ಖಾತರಿ ರಹಿತ ಸಾಲದ ಆರ್ಥಿಕ ನೆರವು ನೀಡುವ ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ 3,600 ಕೋಟಿ ನಿಧಿಯನ್ನು ಮೀಸಲಿಡಲಾಗಿದೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌, ‘ಆರ್ಥಿಕ ಸಮಸ್ಯೆಗಳಿಂದಾಗಿ ದೇಶದ ಯುವಕರು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಆದರೆ ಇದನ್ನು ತಪ್ಪಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಕಾರ ನೀಡಲು ಈ ಯೋಜನೆ ರೂಪಿಸಲಾಗಿದೆ’ ಎಂದು ಹೇಳಿದ್ದಾರೆ.

ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಕ್ಯುಎಚ್‌ಇಐ) ಪ್ರವೇಶ ದೊರೆತ ವಿದ್ಯಾರ್ಥಿಗಳಿಗೆ, ತಮ್ಮ ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಕೊಲಾಟರಲ್‌ ರಹಿತ ಅಥವಾ ಖಾತರಿದಾರರಿಲ್ಲದೆ ಬ್ಯಾಂಕ್‌ ಹಾಗೂ ಆರ್ಥಿಕ ಸಂಸ್ಥೆಗಳಿಂದ ಸಾಲ ನೀಡಲಾಗುತ್ತದೆ.

Vijayaprabha Mobile App free

ಅಂದರೆ, ವಾರ್ಷಿಕ ₹8 ಲಕ್ಷಕ್ಕಿಂತ ಕಡಿಮೆ ಆದಾಯ ಗಳಿಸುವ ಪರಿವಾರದ ಹಾಗೂ ಯಾವುದೇ ಶಿಷ್ಯವೇತನ ಸೌಲಭ್ಯ ಪಡೆಯದ ವಿದ್ಯಾರ್ಥಿಗಳಿಗೆ 7.5 ಲಕ್ಷ ರು. ವರೆಗಿನ ಸಾಲದ ಶೇ.75ಕ್ಕೆ ಸರ್ಕಾರವೇ ಖಾತರಿ ಕೊಡಲಿದೆ. ಅಂತೆಯೇ, ₹8 ಲಕ್ಷಕ್ಕೂ ಅಧಿಕ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರು. ವರೆಗಿನ ಸಾಲದ ಮೇಲೆ ಶೇ.3ರಷ್ಟು ಬಡ್ಡಿ ವಿನಾಯಿತಿ ನೀಡಲಾಗುವುದು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಏಕೀಕೃತ ಪೋರ್ಟಲ್‌ ಪರಿಚಯಿಸಲಿದೆ. 860 ಕ್ಯುಎಚ್‌ಇಐ ಸಂಸ್ಥೆಗಳ 22 ಲಕ್ಷ ವಿದ್ಯಾರ್ಥಿಗಳು ಇದರ ಲಾಭ ಪಡೆಯಲು ಸಮರ್ಥರಾಗಿದ್ದಾರೆ. ಯೋಜನೆಯ ಲಾಭ ಪಡೆಯುವವರ ಪಟ್ಟಿಯನ್ನು ಎನ್‌ಐಆರ್‌ಎಫ್‌ ರ್‍ಯಾಂಕಿಂಗ್‌ ಆಧರಿಸಿ ಪ್ರತಿ ವರ್ಷ ಪರಿಷ್ಕರಿಸಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.