ರೈತರು ಗಮನಿಸಿ: ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ

(RTC- AADHAR LINK) ರಾಜ್ಯದಲ್ಲಿ ಅಕ್ರಮ ಜಮೀನು ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮಕೈಗೊಂಡಿದ್ದು, ಆರ್.ಟಿ.ಸಿ ಯ ಜೊತೆಗೆ ಆಧಾರ್ ಲಿಂಕ್ ಅನ್ನು ಕಡ್ಡಾಯಗೊಳಿಸಿದೆ. ಹೌದು, ಅಕ್ರಮವನ್ನು ತಡೆಯಲು ಸರ್ಕಾರ ಈ…

(RTC- AADHAR LINK) ರಾಜ್ಯದಲ್ಲಿ ಅಕ್ರಮ ಜಮೀನು ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮಕೈಗೊಂಡಿದ್ದು, ಆರ್.ಟಿ.ಸಿ ಯ ಜೊತೆಗೆ ಆಧಾರ್ ಲಿಂಕ್ ಅನ್ನು ಕಡ್ಡಾಯಗೊಳಿಸಿದೆ.

ಹೌದು, ಅಕ್ರಮವನ್ನು ತಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಕಡ್ಡಾಯವಾಗಿ ಲಿಂಕ್ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಇನ್ನು ಆರ್.ಟಿ.ಸಿಯ ಜೊತೆಗೆ ಆಧಾರ್ ಲಿಂಕ್ ಮಾಡುವುದರಿಂದ ಏನು ಪ್ರಯೋಜನ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದಾದ್ಯಂತ ಸುಮಾರು 4 ಕೋಟಿ RTC ಮಾಲೀಕರಿದ್ದು, ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ ಮೂಲಕ ಇಕೆವೈಸಿ ಮಾಡಲಾಗಿದೆ. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Vijayaprabha Mobile App free

RTC ಜೊತೆ ಆಧಾರ್ ಲಿಂಕ್ ನಿಂದ ಏನು ಪ್ರಯೋಜನ:
* ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್ ಮಾಡುವ ಮೂಲಕ ಅಕ್ರಮ ಜಮೀನು ಮಾರಾಟವನ್ನು ಪಡೆಯಬಹುದು.
* ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.