(crop damage) ಈ ಭಾರೀ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಯಾಗಿದೆ. ಅದರಲ್ಲಿ ರೈತರು ಬೆಳೆದ ಬೆಳೆಗಳು ಮಳೆಯಿಂದ ನಾಶವಾಗಿದೆ. ಇದಕ್ಕಾಗಿ ರೈತರು ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದು, ಈ ಕುರಿತು ಕಂದಾಯ ಸಚಿವ ಗುಡ್ ನ್ಯೂಸ್ ನೀಡಿದ್ದಾರೆ.
ಹೌದು, ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ ಶೇಕಡ 32 ರಷ್ಟು ಹೆಚ್ಚು ಮಳೆಯಾಗಿದೆ. 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಬೆಳೆ ಹಾನಿಗೆ ಇನ್ನೊಂದು ವಾರದಲ್ಲಿ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು, ಸಂಪೂರ್ಣ ಹಾನಿಯಾದ ರಸ್ತೆಗಳನ್ನು ಪಟ್ಟಿ ಮಾಡಿ ವರದಿ ಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment