ರಾಜ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಇನ್ನಷ್ಟು ದುಬಾರಿ!

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವುದು ರಾಜ್ಯದಲ್ಲಿ ಈರುಳ್ಳಿ ಬೆಳ್ಳುಳ್ಳಿ ದರ ಹೆಚ್ಚಳಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ. ಅತ್ತ ಬೆಳ್ಳುಳ್ಳಿ ಪೂರೈಸುವ ರಾಜ್ಯಗಳಲ್ಲಿಯೂ ಮಳೆಯಿಂದ ಹಾನಿಯಾಗಿದೆ.…

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವುದು ರಾಜ್ಯದಲ್ಲಿ ಈರುಳ್ಳಿ ಬೆಳ್ಳುಳ್ಳಿ ದರ ಹೆಚ್ಚಳಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ. ಅತ್ತ ಬೆಳ್ಳುಳ್ಳಿ ಪೂರೈಸುವ ರಾಜ್ಯಗಳಲ್ಲಿಯೂ ಮಳೆಯಿಂದ ಹಾನಿಯಾಗಿದೆ. ಮುಂದಿನ ದಿನಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ

ಯಶವಂತಪುರ ಹಾಗೂ ದಾಸನಪುರ ಎಪಿಎಂಸಿಗೆ ಬುಧವಾರ 127 ಲಾರಿಗಳಲ್ಲಿ 38,415 ಚೀಲ ಈರುಳ್ಳಿ ಆವಕವಾಗಿತ್ತು. ಇದರಲ್ಲಿ ರಾಜ್ಯದ ಹತ್ತಿಪ್ಪತ್ತು ಲಾರಿಗಳು ಮಾತ್ರ ಸೇರಿವೆ. ಉಳಿದವೆಲ್ಲ ಪೂನಾದಿಂದ ಬಂದಿವೆ. ಸಗಟು ದರ ಕ್ವಿಂಟಲ್‌ಗೆ ಕನಿಷ್ಠ 2 ಸಾವಿರದಿಂದ ಗರಿಷ್ಠ 4500 ರೂ. ಇತ್ತು. ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 55ರಿಂದ 60 ರೂ.ಗೆ ಮಾರಾಟವಾಗಿದೆ. ಈರುಳ್ಳಿ ಮಾತ್ರವಲ್ಲದೆ ಬೆಳ್ಳುಳ್ಳಿ ದರ ಕೂಡ ಕೆಜಿಗೆ 400 ರೂ.ಗೆ ಏರಿಕೆಯಾಗಿದೆ. ಇದಕ್ಕೂ ಅತಿವೃಷ್ಟಿಯೇ ಕಾರಣ ಎನ್ನಲಾಗಿದೆ. ಬುಧವಾರ ಮಾರುಕಟ್ಟೆಯಲ್ಲಿ ಕೇಜಿಗೆ 400 ರೂ. ದರವಿತ್ತು. ಕಳೆದ ಡಿಸೆಂಬರ್, ಜನವರಿ ವೇಳೆಗೆ ಬೆಳ್ಳುಳ್ಳಿ ಕೆಜಿಗೆ ದಾಖಲೆಯ 500ವರೆಗೆ ಏರಿಕೆಯಾಗಿ ಬಳಿಕ 280, 250 ರೂ.ವರೆಗೆ ಇಳಿಕೆಯಾಗಿತ್ತು. ಕರ್ನಾಟಕಕ್ಕೆ ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದಲೇ ಬೆಳ್ಳುಳ್ಳಿ ಪೂರೈಕೆಯಾಗುತ್ತಿದೆ. ಆ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಬೆಳ್ಳುಳ್ಳಿ ಉತ್ಪಾದನೆ ಕುಸಿತವಾಗಿರುವುದೇ ದರ ಹೆಚ್ಚಳಕ್ಕೆ ಕಾರಣ. ಬೆಳ್ಳುಳ್ಳಿ ದರ ಕೆಜಿಗೆ 450 ರೂ.ವರೆಗೂ ಏರಿಕೆಯಾಗಬಹುದು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.