ರೈತರಿಗೆ ಸಿಹಿ ಸುದ್ದಿ : ಈ ಯೋಜನೆಯಲ್ಲಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(subsidy:) ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಯಲ್ಲಿ ಸಹಾಯಧನ ಹಾಗೂ ಸಬ್ಸಿಡಿಯನ್ನು ನೀಡುತ್ತಿದ್ದು, ಇದೀಗ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.…

(subsidy:) ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಯಲ್ಲಿ ಸಹಾಯಧನ ಹಾಗೂ ಸಬ್ಸಿಡಿಯನ್ನು ನೀಡುತ್ತಿದ್ದು, ಇದೀಗ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಬೆಳೆಯಲು ಇಚ್ಚಿಸಿರುವ ರೈತ ಫಲಾನುಭವಿಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಷ್ಟು ಸಹಾಯಧನ:
ಸಾಮಾನ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಶೇ.90 ರಂತೆ ಗರಿಷ್ಠ 2 ಹೆಕ್ಟೇರ್ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ. ಅಲ್ಪಸಂಖ್ಯಾತ ವರ್ಗದವರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ.

Vijayaprabha Mobile App free

ಅರ್ಜಿ ಸಲ್ಲಿಕೆ ಎಲ್ಲಿ?;
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.