(Farmers Loan) 2024-25 ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ಸಾಲ ಸೌಲಭ್ಯ ನೀಡುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನೀಡುವ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟೆಂಬರ್ 15 ರಿಂದ 2025 ಮಾರ್ಚ್ 31 ರವರೆಗೆ ಮುಂದುವರೆಸಲಾಗುವುದು ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿಸಲು ಸೂಚಿಸಲಾಗಿದೆ.