Yograj Bhatt: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ (Yograj Bhatt) ನಿರ್ದೇಶನದ “ಮನದ ಕಡಲು”(Manada Kadalu) ಸಿನಿಮಾ ಶೂಟಿಂಗ್ ವೇಳೆ ದೊಡ್ಡ ಅವಘಡ ಸಂಭವಿಸಿದ್ದು, 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ (Light Man) ನಿಧನರಾಗಿದ್ದಾರೆ.
ಹೌದು, ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಸುಮಾರು 30 ಅಡಿ ಎತ್ತರದಿಂದ ಲೈಟ್‌ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಲಾದರೂ ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ. ಶೂಟಿಂಗ್ ವೇಳೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದರಿಂದ ಈ ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ಎಫ್‌ಐಆರ್ ದಾಖಲಾಗಿದೆ.
https://vijayaprabha.com/today-is-gouri-festival-2024/