ಬಿಲ್ಲವ ಹೆಣ್ಣು ಮಕ್ಕಳು ವೇಶ್ಯೆಯರು ಎಂದಿದ್ದ ಅರಣ್ಯಾಧಿಕಾರಿ ಬಂಧನ: ಕೀಳು ಮಟ್ಟದ ಆಡಿಯೋ ವೈರಲ್ ಬೆನ್ನಲ್ಲೇ ಕ್ರಮ

ಮಂಗಳೂರು: ಬಿಲ್ಲವ ಸಮಾಜದ 1ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ…

ಮಂಗಳೂರು: ಬಿಲ್ಲವ ಸಮಾಜದ 1ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಆರೋಪಿ ಸಂಜೀವನನ್ನು ಮನೆಯಿಂದಲೇ ವಶಕ್ಕೆ ಪಡೆದಿದ್ದು, ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ಹಿಂದೂ ಹೆಣ್ಣು ಮಕ್ಕಳ ಬಗ್ಗೆ ನಾಲಗೆ ಹರಿಬಿಟ್ಟಿದ್ದ ಮಾತನಾಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಪುತ್ತೂರು ಡಿವೈಎಸ್ಪಿ ಕಚೇರಿಯ ಮುಂಭಾಗದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿದ್ದವು. ಪ್ರತಿಭಟನೆ ಬೆನ್ನಲ್ಲೇ ಸಂಜೀವ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Vijayaprabha Mobile App free

ವಿವಾದ ಸೃಷ್ಟಿಸಿದ್ದ ಆಡಿಯೋದಲ್ಲಿ ಏನಿದೆ:

ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಇದರಲ್ಲಿ ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಮೂಲಕ ಮಾತನಾಡಿದ್ದ ಸಂಜೀವ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂಳೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ, ಹಿಂದುತ್ವದ ಹುಡುಗರು ಸೂಳೆಯರನ್ನಾಗಿ ಮಾಡಿದ್ದಾರೆ. ಬಿಲ್ಲವ ಸಮಾಜದ 1ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ. ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂದು ಆರೋಪಿ ಸಂಜೀವ ದೂರವಾಣಿಯಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.