ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಒಂದು ಕಲ್ಯಾಣ ಇಲಾಖೆಯಿಂದ ನೀಡಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾರು ಅರ್ಹರು:
ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆಸಕ್ತ ಅಭ್ಯರ್ಥಿಗಳು ಜುಲೈ, 10 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. (ಬಾಲಕರಿಗೆ ಮಾತ್ರ).
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ 2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ 1 ಲಕ್ಷ ಮೀರಿರಬಾರದು.
* ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು.
* ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು.
* ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು. (10 ಜುಲೈ 2004 ರಿಂದ ಜುಲೈ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು).
* ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
* ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಜುಲೈ, 10 ರೊಳಗೆ ಸಲ್ಲಿಸಬಹುದು.
* ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಇಲಾಖಾ ವೆಟ್ https://bowd.karnataka.gov.in ನಿಂದ ಪಡೆಯಬಹುದು.
ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆ ದೂ.ಸಂ.0824-2225078, ಉಡುಪಿ ಜಿಲ್ಲೆ ದೂ.ಸಂ.0820-2574881, ಉತ್ತರ ಕನ್ನಡ ದೂ.ಸಂ.08382-2265589 ಹಾಗೂ ಕೇಂದ್ರ ಕಚೇರಿ ದೂ.ಸಂ. 8050770004 ನ್ನು ಸಂಪರ್ಕಿಸಬಹುದು.