BPL card : ಮಾನದಂಡಗಳ ವಿರುದ್ಧವಾಗಿ ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್​ ಸೂಚನೆ

BPL card : ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ…

BPL card vijayaprabha news

BPL card : ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: Bhagyalakshmi yojana : ಫಲಾನುಭವಿಗಳಿಗೆ ಸಿಗುವ ಮೊತ್ತ ಎಷ್ಟು? ಭಾಗ್ಯಲಕ್ಷ್ಮೀ ಬಾಂಡ್ ಹಣ ಡ್ರಾ ಮಾಡಲು ನಿಯಮಗಳೇನು?

Vijayaprabha Mobile App free

ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ‌ಜಾರಿ ಮಾಡಿದ್ದಾರೆ. ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 52 ಸಾವಿರ ಕಾರ್ಡ್ ರದ್ದಾಗುವ ಸಾಧ್ಯತೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.