ಶಹಜಹಾನ್‌ಪುರ: ಆಧುನಿಕ ಕಾಲದಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಆದರೆ ಇಲ್ಲೊಂದು ಅತ್ಯಂತ ಹೇಯ ಕೃತ್ಯ ನಡೆದಿದ್ದು, ಸ್ವತಃ ಮೊಮ್ಮಗನೇ ತನ್ನ ಅಜ್ಜಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಹೌದು, 25 ವರ್ಷದ ಯುವಕನೊಬ್ಬ ತನ್ನ ಅಜ್ಜಿಯ ಮೇಲೆಯೇ ಅತ್ಯಾಚಾರ ಎಸಗಿರುವ ಹೇಯ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದದ ಖುತಾರ್ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ ಮನೆಯಲ್ಲಿ ಅಜ್ಜಿಯೊಬ್ಬಳೇ ಮಲಗಿದ್ದಳು. ಆಗ ಆಕೆಯ ಮೊಮ್ಮಗ ಅಖಿಲೇಶ್ ಕುಮಾರ್ ಆಕೆ ಕೋಣೆಗೆ ಬಂದು ಮೇಲೆರಗಿದ್ದಾನೆ ಹಾಗೂ ರೇಪ್ ಮಾಡಿದ್ದಾನೆ. ಬಳಿಕ ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮನೋಜ್ ಕುಮಾರ್ ಆವಸ್ಥಿ ತಿಳಿಸಿದ್ದಾರೆ.
ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಖಿಲೇಶ್ ಮೇಲೆ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ.