ಗೌರಿ ಹಬ್ಬಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ :‌ ನಾಳೆಯೇ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜೂನ್ ತಿಂಗಳ ಹಣ ಬಿಡುಗಡೆಯಾಗಿದ್ದು, ಕೆಲವರಿಗೆ ಇನ್ನೂ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಶೀಘ್ರವೇ ಜೂನ್ ತಿಂಗಳ ಜೊತೆಗೆ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಹಣ…

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜೂನ್ ತಿಂಗಳ ಹಣ ಬಿಡುಗಡೆಯಾಗಿದ್ದು, ಕೆಲವರಿಗೆ ಇನ್ನೂ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಶೀಘ್ರವೇ ಜೂನ್ ತಿಂಗಳ ಜೊತೆಗೆ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತಾನಾಡಿರುವ ಲಕ್ಷ್ಮಿ ಹೆಬ್ಬಾಳ್ಕಾರ್ ಹಣವನ್ನ ಬಿಡುಗಡೆ ಮಾಡಿದ್ದೇವೆ. ಕೆಲವೊಬ್ಬರಿಗೆ ಹಣ ಬಂದಿದೆ. ಕೆಲವೊಬ್ಬರಿಗೆ ಹಣ ಬಂದಿಲ್ಲ. ಸದ್ಯ ಎಲ್ಲಾ ಖಾತೆಗಳಿಗೂ ಹಣ ಹಾಕಲು ಎಲ್ಲಾ ಪ್ರಕ್ರಿಯೆಗಳನ್ನ ಮಾಡಲಾಗುತ್ತಿದೆ. ಸದ್ಯ ಒಂದು ತಿಂಗಳ ಹಣವನ್ನ ಹಾಕಿದ್ದೇವೆ. ಶೀಘ್ರವೇ 2 ತಿಂಗಳ ಹಣವನ್ನು ಒಟ್ಟಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಇದುವರೆಗೂ ಜೂನ್ ಮಾಹೆಯವರೆಗಿನ ಗೃಹಲಕ್ಷ್ಮೀ ಹಣವನ್ನು ಜಮೆ ಮಾಡಲಾಗಿದೆ. ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು 5 ರಿಂದ 10 ದಿನದೊಳಗೆ ಜಮೆ ಮಾಡುವುದಾಗಿ ಹೇಳಿದರು.

ಗೃಹಲಕ್ಷ್ಮೀ ಯೋಜನೆ ಮೂಲಕ ಇದುವರೆಗೂ ₹26,260 ಕೋಟಿ ಹಣವನ್ನು ಮಹಿಳೆಯರ ಖಾತೆಗೆ ಜಮೆಯನ್ನು ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣ, ದೇಶದ ಸಣ್ಣ ಪುಟ್ಟ ರಾಜ್ಯಗಳ ವಾರ್ಷಿಕವಾದ ಆಯವ್ಯಯಕ್ಕೆ ಸಮನಾಗಿದೆ ಎಂದು ತಿಳಿಸಿದರು. ಯೋಜನೆಯ ಲಾಭವನ್ನು ಪಡೆದ ಮಹಿಳೆಯರು ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಮೂಕಾಂತರ ಹಿಮ್ಮಾಯಿತಿಯನ್ನು ನೀಡಬಹುದು. ಫೇಸ್‍ಬುಕ್, ಇನ್ಸ್ಟಾಗ್ರಾಂ, ಯುಟ್ಯೂಬ್ ಮೂಲಕವಾಗಿ ಅಭಿಪ್ರಾಯವನ್ನು ರೀಲ್ಸ್ ವಿಡಿಯೋದ ಮೂಲಕ ವ್ಯಕ್ತಪಡಿಸಲು ಕೋರಿದ್ದು, ಅತ್ಯುತ್ತಮವಾದ ವಿಡಿಯೋ ರೀಲ್ಸ್‍ಗೆ ಬಹುಮಾನವನ್ನು ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಘೋಷಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.