ಗೃಹಿಣಿಯರಿಗೆ ಸಿಹಿ ಸುದ್ದಿ : ಇಂದು ಅಥವಾ ನಾಳೆ ಜೂನ್‌ ತಿಂಗಳ ಹಣ ಜಮೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ. ಎರಡು ತಿಂಗಳಿನಿಂದ ಗೃಹಲಕ್ಷ್ಮೀ…

ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ʼʼಮೇ, ಜೂನ್‌ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಜಮೆ ಆಗಲಿದೆʼʼ ಎಂದು ವಿವರಿಸಿದ್ದಾರೆ.

ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸ್ಪಷ್ಟವಾಗಿ ನಿರಾಕರಿಸಿದ ಅವರು, ʼʼರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳವರೆಗೂ ಇದು ಮುಂದುವರಿಯಲಿದೆ. ಬಿಜೆಪಿಯವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.