ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೇ ಗಮನಿಸಿ: ಇನ್ಮುಂದೆ ಇಂತಹವರಿಗೆ ಸಿಗುತ್ತೆ 2000 ಹಣ

(gruhalakshmi scheme) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಇನ್ಮುಂದೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ಜಮಾ ಆಗಲಿದೆ. ಈ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.…

(gruhalakshmi scheme) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಇನ್ಮುಂದೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ಜಮಾ ಆಗಲಿದೆ. ಈ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ರಾಜ್ಯ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. ಅದರಂತೆ ಇನ್ನು ಮುಂದೆ ಮಹಿಳೆಯರ ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ 2000 ಹಣ ಖಾತೆಗೆ ಬಂದು ಬೀಳಲಿದೆ.

ಅರ್ಜಿ ಸಲ್ಲಿಕೆ ಹೇಗೆ?;
ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಜು.8 ರಿಂದ ಅರ್ಜಿ ಸಲ್ಲಿಸಬಹುದಾಗಿದೆ.

Vijayaprabha Mobile App free

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್ ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕಾದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.