(gruhalakshmi:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್, ಜುಲೈ ತಿಂಗಳ ಹಣ ಯಜಮಾನಿಯರಿಗೆ ಜಮಾ ಆಗಿಲ್ಲ. ಈ ಕುರಿತು ಇದೀಗ ಎರಡು ತಿಂಗಳ ಹಣ ಜಮಾ ಕುರಿತು ಬಿಗ್ ಅಪ್ಡೇಟ್ ಬಂದಿದೆ.
ಹೌದು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 2 ತಿಂಗಳಿನ ಹಣ ಒಟ್ಟಿಗೆ ಜಮಾ ಆಗಲಿದೆ. ಕೆಲವು ತಾಂತ್ರಿಕ ತೊಂದರೆಯಿಂದ ಸರ್ಕಾರ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಿರಲಿಲ್ಲ. ಇದೀಗ ಸರ್ಕಾರ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುತ್ತಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ಎಂದು ಮೂಲಗಳು ತಿಳಿಸಿದೆ.
ಇನ್ನು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಹಾಗೂ ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.