ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಸಾವು- ಹಲವರಿಗೆ ಗಾಯ : ದೂರು ದಾಖಲು

ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಈ ಕಾರ್ಯಕ್ರಮದ ನೇತೃತ್ವವಹಿಸಿದ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ಈ ಹಿಂದೆ ಗುಪ್ತಚರ  ಇಲಾಖೆಯಲ್ಲಿ ಕೆಲಸ…

ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಈ ಕಾರ್ಯಕ್ರಮದ ನೇತೃತ್ವವಹಿಸಿದ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ಈ ಹಿಂದೆ ಗುಪ್ತಚರ  ಇಲಾಖೆಯಲ್ಲಿ ಕೆಲಸ ಮಾಡಿದ್ದರು.

ಸರ್ಕಾರಿ ಸೇವೆಯಲ್ಲಿದ್ದಾಗ ಆಧ್ಯಾತ್ಮದತ್ತ ಒಲವು ಹೊಂದಿದ್ದ ಅವರು ಆಧ್ಯಾತ್ಮಿಕ ಮಾರ್ಗವನ್ನು ಅನುಸರಿಸಲು ಹುದ್ದೆಗೆ ರಾಜೀನಾಮೆ ನೀಡಿದ್ದರು. ಗುರು ಭೋಲೆ ಬಾಬಾ ಅವರ ಮೂಲ ಹೆಸರು ಸೂರಾಜ್‌ ಪಾಲ್‌.

ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ನಂತರ ಕಾಲೇಜ್‌ ಶಿಕ್ಷಣ ಓದಿ ಉತ್ತರ ಪ್ರದೇಶ ಪೊಲೀಸ್‌ನ ಸ್ಥಳೀಯ ಗುಪ್ತಚರ ಘಟಕದಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ನೇಮಕಗೊಂಡಿದ್ದರು. ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾಗ ಇವರ ಮನಸ್ಸು ಆಧ್ಯಾತ್ಮಿಕತೆಯ ಕಡೆಗೆ ತಿರುಗಿತು. 1999 ರಲ್ಲಿ ಪೊಲೀಸ್ ಕೆಲಸವನ್ನು ತೊರೆದ ಬಳಿಕ ತನ್ನ ಹೆಸರನ್ನು ನಾರಾಯಣ್ ಸಾಕರ್ ಹರಿ ಎಂದು ಬದಲಾಯಿಸಿ ಧಾರ್ಮಿಕ ಉಪನ್ಯಾಸ ನೀಡಲು ಆರಂಭಿಸಿದರು.

Vijayaprabha Mobile App free

ಇವರು ಕೇಸರಿ ಬಟ್ಟೆಯನ್ನು ಧರಿಸುತ್ತಿರಲಿಲ್ಲ. ಬಿಳಿ ಬಣ್ಣದ ಶರ್ಟ್‌ ಮತ್ತು ಪ್ಯಾಂಟ್‌ ಧರಿಸುತ್ತಿದ್ದರು. ತನಗೆ ಸಿಕ್ಕಿದ ದೇಣಿಗೆಯನ್ನು ನಾನು ಇಟ್ಟುಕೊಳ್ಳುವುದಿಲ್ಲ. ಅದನ್ನು ಭಕ್ತರಿಗೆ ನೀಡುತ್ತೇನೆಂದು ಭೋಲೆ ಬಾಬಾ ಉಪದೇಶದಲ್ಲಿ ಹೇಳುತ್ತಿರುತ್ತಾರೆ. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಉಪನ್ಯಾಸ ನೀಡುವಾಗ ಹತ್ತಿರದಲ್ಲೇ ಪತ್ನಿ ಸಹ ಇರುತ್ತಾರೆ.

ನಾನು ಹರಿ(ವಿಷ್ಣು) ಭಕ್ತ ಎಂದು ಹೇಳಿಕೊಳ್ಳುವ ಇವರಿಗೆ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಹೊಂದಿದ್ದಾರೆ. ಕಾಲ್ತುಳಿತವಾದ ನಂತರ ಭೋಲೆ ಬಾಬಾ ನಾಪತ್ತೆಯಾಗಿದ್ದು ಅವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಮಂಗಳವಾರ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮ ನಡೆದ ಸ್ಥಳ ತುಂಬಾ ಚಿಕ್ಕದಾಗಿದ್ದು ಅಲ್ಲಿ ನೆರೆದಿದ್ದ ಜನಸಮೂಹಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತನಿಖೆಗೆ ಸಮಿತಿಯನ್ನು ರಚಿಸಲಾಗಿದ್ದು, 3 ದಾಖಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.