ರಾಜ್ಯಾದ್ಯಂತ ಇಂದು ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ (heavy rain) ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆಯನ್ನು ನೀಡಿದೆ.
ಹೌದು, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ ಸೇರಿದಂತೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ 9 ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ
ತುಮಕೂರು, ಬಳ್ಳಾರಿ ಸೇರಿ ರಾಜ್ಯದ 9 ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರಿನಲ್ಲಿ ಮನೆಗೋಡೆ ಕುಸಿದು ವಿಕಲ ಚೇತನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ 60ಕ್ಕೂ ಹೆಚ್ಚು ಮನೆಗಳು, 40ಕ್ಕೂ ಅಧಿಕ ಅಂಗಡಿಗಳಿಗೆ ನೀರು ನುಗ್ಗಿದೆ. ಬಳ್ಳಾರಿಯಲ್ಲಿ 9 ಸಂಪರ್ಕ ಸೇತುವೆಗಳು ಮುಳುಗಿದ್ದು, ಹೊಲ-ಗದ್ದೆಗಳೂ ಜಲಾವೃತವಾಗಿವೆ. ಹಂಪಿ ಬಳಿಯ ಕಮಲಾಪುರ ಕೆರೆ ಕೋಡಿ ಬಿದ್ದು, ನೂರಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.
https://vijayaprabha.com/raghavendra-swami-aradhana-mahotsava/