Heavy rain: ಕರ್ನಾಟಕ ರಾಜ್ಯದ್ಯಂತ ಮಳೆ ಆರ್ಭಟ ಮತ್ತೆ ಹೆಚ್ಚಾಗಲಿದ್ದು, ಇಂದಿನಿಂದ ಒಂದು ವಾರಗಳ ಕಾಲ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ (Heavy rain) ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜನತೆಗೆ ಹೈ ಅಲರ್ಟ್ ಭೀತಿ!!
ಇನ್ನು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ನಿಟ್ಟಿನಲ್ಲಿ ಕರಾವಳಿ ಭಾಗದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಸೆಪ್ಟೆಂಬರ್ 4ರವರೆಗೆ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದು ಶಾಲಾ-ಕಾಲೇಜುಗಳಿಗೆ ರಜೆ!
ಕಲುಬುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ.
ಹೌದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನನುಕೂಲ ಆಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 2 ಸೋಮವಾರ ಜಿಲ್ಲಾದ್ಯಂತ ಎಲ್ಲ ಸರ್ಕಾರಿ, ಅನುದಾನಿ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
https://vijayaprabha.com/ganesha-festival-2024/