Heavy rain: ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆಯನ್ನು ನೀಡಿದೆ.
ಹೌದು, ವಾಯುಭಾರ ಕುಸಿತು ಪರಿಣಾಮ ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಚಿತ್ರದುರ್ಗ, ತುಮಕೂರು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ.
ಅಲ್ಲದೆ ಬೆಂಗಳೂರು ನಗರದಾದ್ಯಂತ ಮೋಡಕವಿದ ವಾತಾವರಣವಿದ್ದು ಮಳೆ ಸುರಿಯುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .
https://vijayaprabha.com/easy-natural-home-remedies-available-at-home/