Heavy rain:ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು,ಕರಾವಳಿಯಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳುರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬೆಂ ಗ್ರಾಮಾಂತರ, ಬೆಂ ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.