Accident: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿಯಲ್ಲಿ ಇಂದು ನಡೆದಿದೆ.
ಹೌದು, ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವಿಗೀಡಾದವರು. ಅನೀಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಇನ್ನೊಂದು ಬದಿಯಲ್ಲಿದ್ದ KSRTC ಬಸ್‌ಗೆ ಡಿಕ್ಕಿ ಹೊಡೆದಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment