(hsrp:-) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ HSRP ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ನಾಲ್ಕು ಬಾರಿ ವಿಸ್ತರಿಸಿದೆ. ಇದೀಗ ಸೆ. 15 ಕೊನೆಯ ದಿನಾಂಕವಾಗಿದೆ.
2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ HSRP ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಕೆಗೆ ಸೆಪ್ಟೆಂಬರ್ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಸಬೇಕು.
HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment