(hsrp penalty) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನು ಕೇವಲ 11 ದಿನ ಮಾತ್ರ ಬಾಕಿ ಉಳಿದಿದೆ.
ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಕೇಂದ್ರ ಸರ್ಕಾರದ ನಿರ್ದೇಶನದ 2019 ಎಪ್ರೀಲ್ 1 ರ ಮೊದಲು ನೋಂದಣಿಯಾದ ವಾಹನಗಳು HSRP ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಎರಡು ಕೋಟಿ ವಾಹನಗಳು HSRP ಅಳವಡಿಸಿಕೊಳ್ಳಬೇಕಿದ್ದ ಹಿನ್ನಲೆಯಲ್ಲಿ ಕಳೆದ ವರ್ಷ ನವೆಂಬರ್ HSRP ಅಳವಡಿಕೆಗೆ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಗಡುವು ನೀಡಿತ್ತು. ಆದರೆ, ವಾಹನ ಮಾಲೀಕರು ಆಸಕ್ತಿ ತೋರಿಸದ ಕಾರಣ 2024ರ ಫೆಬ್ರವರಿವರೆಗೆ ಗಡುವು ವಿಸ್ತರಿಸಲಾಗಿತ್ತು. ಹೆಚ್ಚಿನ ವಾಹನಗಳ ಮಾಲೀಕರು HSRP ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ಜುಲೈ ಮತ್ತು ಸೆಪ್ಟೆಂಬರ್ 15ಕ್ಕೆ ಎರಡು ಬಾರಿ ಗಡುವು ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿತ್ತು.
ಇದೇ ಸೆಪ್ಟೆಂಬರ್ 15ಕ್ಕೆ ರಾಜ್ಯ ಸರ್ಕಾರ ನೀಡಿದ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ಸೆ. 16ರಿಂದ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.