ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಏರಿಕೆ; ಇಂದಿನಿಂದ ದೇಶದಲ್ಲಿ ಯಾವ ಬದಲಾವಣೆಗಳು ಜಾರಿಗೆ ಬರಲಿವೆ?

cylinder price: ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸುವ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 39 ರೂ.ಗಳಷ್ಟು…

LPG cylinder price

cylinder price: ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸುವ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 39 ರೂ.ಗಳಷ್ಟು ಹೆಚ್ಚಿಸಲಾಗಿದೆ.

ಹೌದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39 ರೂ.ನಷ್ಟು ಹೆಚ್ಚಿಸಿದ್ದು, 14 ಕೆಜಿ ಗೃಹಬಳಕೆಯ ಸಿಲಿಂಡರ್​ನ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.

ಇಂದು ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು.

Vijayaprabha Mobile App free

ಇನ್ನು, ರೆಸ್ಟೋರೆಂಟ್‌, ಹೋಟೆಲ್‌, ಸಣ್ಣ ಕೈಗಾರಿಕೆ, ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದ್ದು, ಹೊಸ ಬೆಲೆಗಳು ಇಂದಿನಿಂದಲೇ ಜಾರಿಗೆ ಬರಲಿವೆ.

ಇಂದಿನಿಂದ ಹೊಸ ರೂಲ್ಸ್ ಜಾರಿ; ದೇಶದಲ್ಲಿ ಯಾವ ಬದಲಾವಣೆಗಳು ಜಾರಿಗೆ ಬರಲಿವೆ?

ಇಂದಿನಿಂದ ಅಂದರೆ ಸೆಪ್ಟೆಂಬರ್ 1 ರ ಭಾನುವಾರದಂದು ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿದ್ದು, ಇದು ಇಂದಿನಿಂದ ಜಾರಿಗೆ ಬರಲಿದೆ.

ಇದು ಆಧಾರ್ ಕಾರ್ಡ್, ಕ್ರೆಡಿಟ್ ಕಾರ್ಡ್, LPG ಸಿಲಿಂಡರ್ ಮತ್ತು FD ಗಳಿಗೆ ನಿಯಮಗಳನ್ನು ಒಳಗೊಂಡಿದೆ. ಈ ಬದಲಾವಣೆಗಳು ನಿಮ್ಮ ಮಾಸಿಕ ವೆಚ್ಚಗಳ ಮೇಲೆ ಪರಿಣಾಮ ಬೀರಬಹುದು.

TRAI ಹೊಸ ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿದ್ದು, ಈ ನಿಯಮಗಳು ಸ್ಕ್ಯಾಮ್ ಕಾಲ್ ಮತ್ತು ಸಂದೇಶಗಳಿಂದ ಅಲ್ಪ ಪರಿಹಾರ ನೀಡಲಿವೆ.

ಅಲ್ಲದೆ, HDFC, IDFC ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ರಿವಾರ್ಡ್‌ಗಳಲ್ಲಿ ಬದಲಾವಣೆಗಳಾಗಲಿವೆ. ರಿವಾರ್ಡ್‌ ಮತ್ತು ಇತರ ಪ್ರಯೋಜನಗಳಿರುವ ರುಪೇ ಕಾರ್ಡ್‌ಗಳನ್ನು ಒದಗಿಸುವಂತೆ NPCI ಬ್ಯಾಂಕ್‌ಗಳಿಗೆ ಸೂಚಿಸಿದೆ.

ಉಚಿತ ಆಧಾರ್ ನವೀಕರಣವು ಸೆಪ್ಟೆಂಬರ್ 14ರ ನಂತರ ಮುಕ್ತಾಯಗೊಳ್ಳಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.