ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 10 ಮತ್ತು 13 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 13 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 12 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.