ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಪ್ರಾಸಿಕ್ಯೂಷನ್ ದೂರು (ಪಿಸಿ) ಸಲ್ಲಿಸಿದೆ.
ಪ್ರಕರಣದಲ್ಲಿ ಶಾಸಕ ಮತ್ತು ಪರಿಶಿಷ್ಟ ಪಂಗಡದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಹಗರಣದ ಮಾಸ್ಟರ್ ಮೈಂಡ್ ಎಂದಿರುವ ಇಡಿ, ಸತ್ಯನಾರಾಯಣ ವರ್ಮಾ, ಎಟಕರಿ ಸತ್ಯನಾರಾಯಣ, ಜೆ.ಜಿ.ಪದ್ಮನಾಭ, ನಾಗೇಶ್ವರ ರಾವ್, ನೆಕ್ಕಂಟಿ ನಾಗರಾಜ್ ಮತ್ತು ವಿಜಯ್ ಕುಮಾರ್ ಗೌಡ ಸೇರಿದಂತೆ ಇತರ 24 ಜನರ ಸಹಾಯದಿಂದ ಈ ಹಗರಣದ ನಡೆಸಲಾಗಿದೆ ಎಂದು ತನ್ನ ವರದಿಯಲ್ಲಿ ಹೇಳಿದೆ.
ನಿಗಮದ ಖಾತೆಗಳಿಂದ ಸುಮಾರು 89.62 ಕೋಟಿ ರೂ.ಗಳನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ನಕಲಿ ಖಾತೆಗಳಿಗೆ ವರ್ಗಾಯಿಸಲಾಗಿದೆ. ನಂತರ ಶೆಲ್ ಸಂಸ್ಥೆಗಳ ಮೂಲಕ ಲಾಂಡರಿಂಗ್ ಮಾಡಲಾಗಿದೆ. ಮೇ 2024ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆಯ ಬಳಿಕ ಈ ಹಗರಣ ಬೆಳಕಿಗೆ ಬಂದಿದೆ ಎಂದು ಇಡಿ ತಿಳಿಸಿದೆ. ನ್ಯಾಯಾಲಯವು ಪಿಸಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ.