ಭಾರತಕ್ಕೆ 6 ತಿಂಗಳಲ್ಲಿ ₹2.26 ಲಕ್ಷ ಕೋಟಿ ಮೌಲ್ಯದ ಚಿನ್ನ ಆಮದು

ನವದೆಹಲಿ: ದೇಶದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದರೂ, ಚಿನ್ನದ ಖರೀದಿ ಮಾತ್ರ ನಿಂತಿಲ್ಲ. ಕಳೆದ ಏಪ್ರಿಲ್‌- ಸೆಪ್ಟೆಂಬರ್‌ ಅವಧಿಯಲ್ಲಿ ಭಾರತ 2.26 ಲಕ್ಷ ಕೋಟಿ ರು. ಮೌಲ್ಯದ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಂಡಿದೆ. ಇದು ಕಳೆದ…

Gold price today

ನವದೆಹಲಿ: ದೇಶದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದರೂ, ಚಿನ್ನದ ಖರೀದಿ ಮಾತ್ರ ನಿಂತಿಲ್ಲ. ಕಳೆದ ಏಪ್ರಿಲ್‌- ಸೆಪ್ಟೆಂಬರ್‌ ಅವಧಿಯಲ್ಲಿ ಭಾರತ 2.26 ಲಕ್ಷ ಕೋಟಿ ರು. ಮೌಲ್ಯದ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಂಡಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.21.78ರಷ್ಟು ಏರಿಕೆಯಾಗಿದೆ.

ಕಳೆದ ವರ್ಷದ ಏಪ್ರಿಲ್‌- ಸೆಪ್ಟೆಂಬರ್‌ ಅವಧಿಯಲ್ಲಿ ಭಾರತ 1.87 ಲಕ್ಷ ಕೋಟಿ ರು. ಮೌಲ್ಯದ ಚಿನ್ನದ ಆಮದು ಮಾಡಿಕೊಂಡಿತ್ತು. ಕಳೆದ ಏಪ್ರಿಲ್‌ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಚಿನ್ನದ ಮೇಲಿನ ಆಮದು ಸುಂಕ ಕಡಿಮೆ ಮಾಡಿತ್ತು. ಅದರ ಬೆನ್ನಲ್ಲೇ ದೇಶಕ್ಕೆ ದಾಖಲೆ 2.26 ಲಕ್ಷ ಕೋಟಿ ರು. ಮೌಲ್ಯದ ಚಿನ್ನ ಆಮದು ಮಾಡಿಕೊಳ್ಳಲಾಗಿದೆ.

2023-24ರ ಹಣಕಾಸು ವರ್ಷದಲ್ಲಿ ಭಾರತ ಒಟ್ಟಾರೆ 3.82 ಲಕ್ಷ ಕೋಟಿ ರು. ಮೌಲ್ಯದ ಚಿನ್ನ ಆಮದು ಮಾಡಿಕೊಂಡಿತ್ತು.

Vijayaprabha Mobile App free

ಚೀನಾದ ನಂತರ ಭಾರತವು ವಿಶ್ವದ ಎರಡನೇ ಅತಿದೊಡ್ಡ ಚಿನ್ನದ ಗ್ರಾಹಕ ದೇಶವಾಗಿದೆ. ಭಾರತಕ್ಕೆ ಸ್ವಿಜರ್ಲೆಂಡ್‌ ಅತಿ ದೊಡ್ಡ ರಫ್ತುದಾರ ದೇಶವಾಗಿದ್ದು, ಭಾರತಕ್ಕೆ ಅಮದಾಗುವ ಚಿನ್ನಗಳ ಪೈಕಿ ಶೇ.40ರಷ್ಟು ಪಾಲನ್ನು ಹೊಂದಿದೆ. ನಂತರ ಯುಎಇ(ಶೇ.16), ದಕ್ಷಿಣ ಆಫ್ರಿಕಾ(ಶೇ.10)ರಷ್ಟು ಚಿನ್ನಗಳನ್ನು ಭಾರತಕ್ಕೆ ರಫ್ತು ಮಾಡುತ್ತವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.