ಭಾರತ ಯುದ್ಧದ ಬದಲು ಸಂಘರ್ಷ ಇತ್ಯರ್ಥಕ್ಕೆ ಬೆಂಬಲ ನೀಡುತ್ತದೆ: ಪುಟಿನ್‌ ಎದುರೇ ಪ್ರಧಾನಿ ಮೋದಿ ಸ್ಪಷ್ಟನೆ

ನವದೆಹಲಿ/ಕಜಾನ್‌: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾದಲ್ಲೇ ನಿಂತು ಪ್ರಧಾನಿ ನರೇಂದ್ರ ಮೋದಿ ಇನ್ನೊಮ್ಮೆ ಯುದ್ಧದ ವಿರುದ್ಧ ಮಾತನಾಡಿದ್ದು, ‘ಭಾರತವು ಯುದ್ಧವನ್ನು ಬೆಂಬಲಿಸುವುದಿಲ್ಲ. ನಾವು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಸಂಘರ್ಷ ಬಗೆಹರಿಸಿಕೊಳ್ಳುವುದನ್ನು ಬೆಂಬಲಿಸುತ್ತೇವೆ’…

ನವದೆಹಲಿ/ಕಜಾನ್‌: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾದಲ್ಲೇ ನಿಂತು ಪ್ರಧಾನಿ ನರೇಂದ್ರ ಮೋದಿ ಇನ್ನೊಮ್ಮೆ ಯುದ್ಧದ ವಿರುದ್ಧ ಮಾತನಾಡಿದ್ದು, ‘ಭಾರತವು ಯುದ್ಧವನ್ನು ಬೆಂಬಲಿಸುವುದಿಲ್ಲ. ನಾವು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಸಂಘರ್ಷ ಬಗೆಹರಿಸಿಕೊಳ್ಳುವುದನ್ನು ಬೆಂಬಲಿಸುತ್ತೇವೆ’ ಎಂದು ನೇರವಾಗಿ ಹೇಳಿದ್ದಾರೆ.

ರಷ್ಯಾದಲ್ಲಿ ನಡೆಯುತ್ತಿರುವ ಬ್ರಿಕ್ಸ್‌ ಶೃಂಗದಲ್ಲಿ ಬುಧವಾರ ಮಾತನಾಡಿದ ಅವರು ರಷ್ಯಾ-ಉಕ್ರೇನ್‌ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವ ಬಗ್ಗೆ ನಿರ್ಣಯ ಅಂಗೀಕರಿಸಬೇಕು ಎಂದು ಪರೋಕ್ಷ ಸಂದೇಶ ರವಾನಿಸಿದರು.

ಯುದ್ಧ, ಆರ್ಥಿಕ ಅಸ್ಥಿರತೆ, ಹವಾಮಾನ ಬದಲಾವಣೆ ಹಾಗೂ ಭಯೋತ್ಪಾದನೆಯ ವಿಷಯದಲ್ಲಿ ಬ್ರಿಕ್ಸ್‌ ರಚನಾತ್ಮಕ ಪಾತ್ರ ನಿಭಾಯಿಸುವ ಮೂಲಕ ಜಗತ್ತನ್ನು ಸರಿಯಾದ ದಾರಿಯಲ್ಲಿ ಕರೆದುಕೊಂಡು ಹೋಗಲು ಅವಕಾಶವಿದೆ. ನಾವು ಮಾತುಕತೆ ಹಾಗೂ ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ. ಯುದ್ಧವನ್ನು ಬೆಂಬಲಿಸುವುದಿಲ್ಲ. ಎಲ್ಲಾ ದೇಶಗಳೂ ಒಗ್ಗಟ್ಟಿನಿಂದ ಕೋವಿಡ್‌ ಸಾಂಕ್ರಾಮಿಕವನ್ನು ಎದುರಿಸಿದಂತೆ ಬೇರೆ ಸವಾಲುಗಳನ್ನೂ ಎದುರಿಸಿ ಗೆಲ್ಲಲು ಸಾಧ್ಯವಿದೆ ಎಂದು ಮೋದಿ ತಿಳಿಸಿದ್ದಾರೆ.

Vijayaprabha Mobile App free

ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುವಾಗ ವೇದಿಕೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಇದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.