ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಾ ಐಶ್ವರ್ಯಾ ರೈ? – ಪೋಸ್ಟ್ ವೈರಲ್

ಮುಂಬೈ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಐಶ್ವರ್ಯಾ ರೈ ಎಂಬ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ಮಾಜಿ ವಿಶ್ವಸುಂದರಿ ಅಧಿಕೃತ ಮಾಹಿತಿ ನೀಡಿಲ್ಲ. ಬ್ರಾಂಡ್ ಲೋರಿಯಲ್‌ನ ಜಾಗತಿಕ ರಾಯಭಾರಿಯಾಗಿರುವ ಐಶ್ವರ್ಯಾ, 2024…

ಮುಂಬೈ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಐಶ್ವರ್ಯಾ ರೈ ಎಂಬ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ಮಾಜಿ ವಿಶ್ವಸುಂದರಿ ಅಧಿಕೃತ ಮಾಹಿತಿ ನೀಡಿಲ್ಲ.

ಬ್ರಾಂಡ್ ಲೋರಿಯಲ್‌ನ ಜಾಗತಿಕ ರಾಯಭಾರಿಯಾಗಿರುವ ಐಶ್ವರ್ಯಾ, 2024 ರ ಲೋರಿಯಲ್ ಪ್ಯಾರಿಸ್ ಫ್ಯಾಶನ್ ವೀಕ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ನಟಿ ಧರಿಸಿದ್ದ ಕೆಂಪು ಬಣ್ಣದ ಉಡುಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಬಾಡಿ ಶೆಮಿಂಗ್​​​ ರೀತಿಯಲ್ಲಿ ನಟಿ ಟ್ರೋಲ್​ ಆಗುತ್ತಿದ್ದಂತೆ ರೆಡ್ಡಿಟ್ ಹಂಚಿಕೊಂಡಿರುವ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ನಾನು ಐಶ್ವರ್ಯ ಅವರನ್ನು ಸಾಕಷ್ಟು ವರ್ಷಗಳಿಂದ ನೋಡುತ್ತಿದ್ದೇನೆ. ಐಶ್ವರ್ಯಾ ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದಾಗಿ ಡಯೆಟ್​ಗೆ ಮಾಡುತ್ತಿಲ್ಲ, ಜೊತೆಗೆ ತೂಕ ಇಳಿಸಿಕೊಳ್ಳುವ ಯಾವುದೇ ಔಷಧಿಗಳನ್ನು ಆಕೆ ತೆಗೆದುಕೊಳ್ಳುತ್ತಿಲ್ಲ. ಆದರೆ ನಾನು ಅವರ ಆರೋಗ್ಯ ಸಮಸ್ಯೆಯ ಬಗ್ಗೆ ಬಹಿರಂಗಪಡಿಸುವುದಿಲ್ಲ” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

Vijayaprabha Mobile App free

ಪೋಸ್ಟ್​ ವೈರಲ್​​ ಆಗುತ್ತಿದ್ದಂತೆ ಡಿಲೀಟ್​ ಕೂಡಾ ಮಾಡಲಾಗಿದೆ. ಐಶ್ವರ್ಯಾ ರೈ ಬಚ್ಚನ್ ಅವರ ಆರೋಗ್ಯ ಸ್ಥಿತಿ, ವೈಯಕ್ತಿಕ ಜೀವನದ ಊಹಾಪೋಹಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.