ಬೆಂಗಳೂರು: ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದ ಬಿಜೆಪಿಗೆ ಕಾಂಗ್ರೆಸ್ ಟ್ವೀಟ್ ಮೂಲಕವೇ ತಿರುಗೇಟು ನೀಡಿದೆ.
ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ,
ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ. ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಪೋಣಿಸುತ್ತಿದೆ. ಬಸ್ಸುಗಳ ಪೂಜೆಗೆ ಹೂವು, ನಿಂಬೆಹಣ್ಣಿಗೂ ಹಣ ಕೊಡದೆ ನೌಕರರು ಸ್ವಂತ ಹಣದಿಂದ ಪೂಜೆ ಮಾಡಿದ್ದನ್ನು ರಾಜ್ಯದ ಜನ ಮರೆತಿಲ್ಲ. ಸಾರಿಗೆ ಸಂಸ್ಥೆಯ ಆಸ್ತಿಗಳನ್ನು ಅಡಮಾನ ಇಟ್ಟ ಕೀರ್ತಿ ನಿಮಗೇ ಸಲ್ಲಬೇಕು ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ನಿನ್ನೆ ಟ್ವೀಟ್ ಮಾಡಿದ್ದ ಬಿಜೆಪಿ, ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ @INCKarnataka ಸರ್ಕಾರದ ಬಳಿ ದುಡ್ಡಿಲ್ಲ. ಪ್ರತಿ ಬಸ್ಸಿಗೆ ಕೇವಲ ₹100 ನೀಡುವಷ್ಟರ ಮಟ್ಟಿಗೆ ಸಾರಿಗೆ ಇಲಾಖೆ ದಿವಾಳಿಯಾಗಿದೆ!! ಎಂದಿತ್ತು.