(Two wheeler) ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ದ್ವಿಚಕ್ರ ವಾಹನವನ್ನು ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಹಾಗಾದರೆ ಯಾರಿಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜೆನ್ಸಿಗಳ ಮೂಲಕ ಅರ್ಹ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ದ್ವಿಚಕ್ರವಾಹನಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment