ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಹಿಂದುಸ್ತಾನ್ ಕಾಪರ್ ಲಿಮಿಟೆಡ್ (Hindustan Copper Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Hindustan Copper Recruitment 2024).
ಒಟ್ಟು 56 ಜೂನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ.
ಹುದ್ದೆಗಳ ವಿವರ
ಜೂನಿಯರ್ ಮ್ಯಾನೇಜರ್ (ಮೈನಿಂಗ್)- 46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್)- 6 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಕಂಪನಿ ಸೆಕ್ರೆಟರಿ) 2 ಹುದ್ದೆ, ವಿದ್ಯಾರ್ಹತೆ: ಕಂಪನಿ ಸೆಕ್ರೆಟರಿ, ಪದವಿ
ಜೂನಿಯರ್ ಮ್ಯಾನೇಜರ್ (ಫೈನಾನ್ಸ್)- 1 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ
ಜೂನಿಯರ್ ಮ್ಯಾನೇಜರ್ (ಎಚ್‌ಆರ್) 1 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ, ಎಂಬಿಎ
ವಯೋಮಿತಿ
ಗರಿಷ್ಠ ವಯೋಮಿತಿ 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ / ಇಡಬ್ಲ್ಯುಎಸ್) ವಿಭಾಗದ ಅಭ್ಯರ್ಥಿಗಳಿಗೆ 10, ಪಿಡಬ್ಲ್ಯುಡಿ (ಒಬಿಸಿ) ವಿಭಾಗದ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ವಿಭಾಗದ ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 30,000 ರೂ. – 1,20,000 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
Hindustan Copper Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.hindustancopper.com/RecruitmentNew/CandidateLogin/113).
- ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
- ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ಪಾರಂ ಡೌನ್‌ಲೋಡ್ ಮಾಡಿ ಪ್ರಿಂಟ್‌ಔಟ್ ತೆಗೆದಿಡಿ.