(District Court) ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಇಲ್ಲಿದೆ.
ಹುದ್ದೆ ವಿವರ:
ಜವಾನ
ಹುದ್ದೆಗಳ ಸಂಖ್ಯೆ:
26
ಉದ್ಯೋಗ ಸ್ಥಳ:
ಹಾವೇರಿ ಜಿಲ್ಲಾ ನ್ಯಾಯಾಲಯ
ವೇತನ ಶ್ರೇಣಿ:
17,000-28,950
ವಿದ್ಯಾರ್ಹತೆ:
* SSLC ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.
ವಯೋಮಿತಿ:
* ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು.
* ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಆಯ್ಕೆ ವಿಧಾನ:
* ಕನ್ನಡ ಓದಲು ಮತ್ತು ಬರೆಯಲು ಅಭ್ಯರ್ಥಿ ಹೊಂದಿರುವ ಸಾಮರ್ಥ್ಯ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನ ಇರುತ್ತದೆ.
* ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ 1:10 ರ ಅನುಪಾತದಲ್ಲಿ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು.
* ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ. ಸದರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದಲ್ಲಿ ಆಯ್ಕೆಗೆ ಅರ್ಹರಾಗುವುದಿಲ್ಲ.
ಅರ್ಜಿ ಶುಲ್ಕ ವಿವರ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 100
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://haveri.dcourts.gov.in/online-recruitment/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
03-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
01-08-2024