ಬೆಂಗಳೂರು: ಪದವಿ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಇಂಡಿಯನ್ ಹೈವೇ ಮ್ಯಾನೇಜ್‌ಮೆಂಟ್ ಕಂಪನಿ ಲಿಮಿಟೆಡ್ (Indian Highway Management Company Limited) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (IHMCL Recruitment 2024). ಒಟ್ಟು 31 ಹುದ್ದೆ ಖಾಲಿ ಇದೆ. ಎಂಜಿನಿಯರ್ ಮತ್ತು ಆಫೀಸರ್ ಹುದ್ದೆ ಇದಾಗಿದ್ದು, ಪದವಿ, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಎಂಜಿನಿಯರ್ – 30 ಮತ್ತು ಆಫೀಸರ್ – 1 ಹುದ್ದೆ ಖಾಲಿ ಇದೆ. ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಐಟಿ / ಸಿಎಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್ / ಎಲೆಕ್ಟ್ರಿಕಲ್ / ಇನ್‌ಸ್ಟ್ರುಮೆಂಟೇಶನ್ / ಡಾಟಾ ಸೈನ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಇನ್ನು ಸಿಎ, ಸಿಎಂಎ ವಿದ್ಯಾರ್ಹತೆ ಹೊಂದಿದವರು ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಯೋಮಿತಿ
ಎಂಜಿನಿಯರಿಂಗ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ. ಗರಿಷ್ಠ ವಯಸ್ಸು 30 ವರ್ಷ. ಆಫೀಸರ್ ಹುದ್ದೆಗೂ ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಗೇಟ್ (GATE) ಅಂಕ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಮಾಸಿಕ ವೇತನ
ಆಯ್ಕೆಯಾದವರಿಗೆ 40,000 ರೂ. – 1,40,000 ರೂ. ಮಾಸಿಕ ವೇತನ ದೊರೆಯಲಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://recruitment.ihmcl.co.in/panel/login.php)
ಅಗತ್ಯ ಮಾಹಿತಿ, ಇಮೇಲ್ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
ಅಗತ್ಯ ಡಾಕ್ಯುಮೆಂಟ್, ಫೋಟೊ ಅಪ್‌ಲೋಡ್ ಮಾಡಿ.
ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಅಪ್ಲಿಕೇಷನ್ ಫಾರಂನ ಪ್ರಿಂಟ್‌ಔಟ್ ತೆಗೆದಿಡಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: ihmcl.co.inಕ್ಕೆ ಭೇಟಿ ನೀಡಿ.