SSLC ಹಾಗು PUC ಆಗಿರುವಂತ ಮಹಿಳೆಯರಿಗೆ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗಾವಕಾಶವಿದೆ, ಖಾಲಿ ಇರುವಂತ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಆಸಕ್ತರು ಅರ್ಜಿಸಲ್ಲಿಸಿ. ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಬೆಳಗಾವಿ ಗ್ರಾಮೀಣ ವಾಪ್ಯಿಯಲ್ಲಿ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿಯರು ಹಾಗೂ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರ ಹೀಗಿದೆ: ಅಂಗನವಾಡಿ ಕಾರ್ಯಕರ್ತೆ ಈ ಹುದ್ದೆಗೆ ಅರ್ಜಿಸಲ್ಲಿಸಲು ಪಿಯುಸಿ ಪಾಸ್ ಆಗಿರಬೇಕು. ಇನ್ನೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕು.ವಯೋಮಿತಿ: ಕನಿಷ್ಟ 19 ವರ್ಷ ಹಾಗೂ ಗರಿಷ್ಟ 35 ವರ್ಷ ನಿಗದಿಪಡಿಸಲಾಗಿದೆ ಇನ್ನೂ ಈ ಹುದ್ದೆಯಲ್ಲಿ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲಾತಿ ಬೇಕು?ವಾಸಸ್ಥಳ ದೃಢೀಕರಣ ಪತ್ರಜಾತಿ ಪ್ರಮಾಣ ಪತ್ರಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರಅರ್ಜಿ ನಿಗದಿತ ನಮೂನೆ (ಆನ್‌ಲೈನ್)ಜನನ ಪ್ರಮಾಣ ಪತ್ರಜನ್ಮ ದಿನಾಂಕ ಇರುವ SSLC / PUC ಅಂಕಪಟ್ಟಿನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
ವೇತನ ಶ್ರೇಣಿಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ:ಅಂಗನವಾಡಿ ಕಾರ್ಯಕರ್ತೆ : ರೂ 10,000/-ಅಂಗನವಾಡಿ ಸಹಾಯಕಿ : ರೂ 5,000/- ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ:ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಗಸ್ಟ್ 08, 2024 ಕೊನೆಯ ದಿನವಾಗಿರುತ್ತದೆಬೆಳಗಾವಿ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 04, 2024 ಕೊನೆಯ ದಿನವಾಗಿದೆ.ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ