ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡಲು ಆ. 2 ಕೊನೆಯ ದಿನ

ನವದೆಹಲಿ: ಭಾರತೀಯ ನೌಕಾ ಪಡೆ (Indian Navy)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಇಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ…

ನವದೆಹಲಿ: ಭಾರತೀಯ ನೌಕಾ ಪಡೆ (Indian Navy)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಇಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Navy Recruitment). ಚಾರ್ಜ್‌ಮ್ಯಾನ್‌, ಟ್ರೇಡ್ಸ್‌ಮ್ಯಾನ್‌, ಕುಕ್‌, ಫೈರ್‌ ಮ್ಯಾನ್‌ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಆಗಸ್ಟ್‌ 2.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚಾರ್ಜ್‌ಮ್ಯಾನ್‌ (ಮದ್ದುಗುಂಡು ಕಾರ್ಯಾಗಾರ) 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಚಾರ್ಜ್‌ಮ್ಯಾನ್‌ (ಫ್ಯಾಕ್ಟರಿ) 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಟ್ರೇಡ್ಸ್‌ಮ್ಯಾನ್‌ ಮೇಟ್ 161 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕೀಟ ನಿಯಂತ್ರಣ ಕಾರ್ಯಕರ್ತ (Pest Control Worker) 18 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕುಕ್ 9 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) (ಮಿನಿಸ್ಟ್ರಿಯಲ್) 16 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಚಾರ್ಜ್‌ಮ್ಯಾನ್‌ (ಮೆಕ್ಯಾನಿಕ್) 18 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೈಂಟಿಫಿಕ್ ಅಸಿಸ್ಟೆಂಟ್ 4 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಡ್ರಾಟ್ಸ್‌ಮ್ಯಾನ್‌ (Draughtsman) (ಕನ್ಟ್ರಕ್ಷನ್‌) 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಫೈರ್ ಮ್ಯಾನ್ 444 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಅಗ್ನಿಶಾಮಕ ಎಂಜಿನ್ ಚಾಲಕ 58 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ

ವಯೋಮಿತಿ ಮತ್ತು ಅರ್ಜಿ ಸುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 295 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

Vijayaprabha Mobile App free

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

Indian Navy Recruitment ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (joinindiannavy.gov.in).
  • ಹೆಸರು ನಮೂದಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲೀಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.