(ANGANWADI-2024) ಹುಬ್ಬಳ್ಳಿ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
ಅಂಗನವಾಡಿ ಕಾರ್ಯಕರ್ತೆ ಹುದ್ದೆ
ಅಂಗನವಾಡಿ ಸಹಾಯಕಿ ಹುದ್ದೆ
ಹುದ್ದೆಯ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆ: 190
ಅಂಗನವಾಡಿ ಸಹಾಯಕಿ ಹುದ್ದೆ: 9
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:
12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್
ಅಂಗನವಾಡಿ ಸಹಾಯಕಿ ಹುದ್ದೆಗೆ ವಿದ್ಯಾರ್ಹತೆ:
10ನೇ ತರಗತಿ ಪಾಸ್
ವಯೋಮಿತಿ:
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು. ವಯೋಮಿತಿ ಸಡಿಲಿಕೆ ಅನ್ವಯ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
02-09-2024
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://anganwadirecruit.kar.nic.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.